Tuesday, July 8, 2025

ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಬಗ್ಗೆ ದಿನಾಂಕ:01.07.2025 ರ ಸರ್ಕಾರದ , ಸುತ್ತೋಲೆ

ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ತನ್ನ ವರದಿಯಲ್ಲಿ ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ. ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವೆಂದು ಘೋಷಿಸಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಸರ್ಕಾರವು ಸುತ್ತೋಲೆ ಹೊರಡಿಸಿದೆ.

Thursday, July 11, 2024

KGID BONUS ORDER

ಕರ್ನಾಟಕ ಸರ್ಕಾರಿ ವಿಮಾ ಇಲಾಖೆಯ ಕಡ್ಡಾಯ ಜೀವ ವಿಮಾ ಯೋಜನೆಯಡಿ ದಿನಾಂಕ:01/04/2018 ರಿಂದ 31/03/2020 ಕ್ಕೆ ಅಂತ್ಯಗೊಂಡ ದೈವಾರ್ಷಿಕ ಅವಧಿಗೆ ವಿಮಾ ಮೌಲ್ಯಮಾಪನ ವರದಿಯ ಆಧಾರದ ಮೇಲೆ ಜೀವ ವಿಮಾ ಪಾಲಿಸಿಗಳ ಸ್ಥಿರಪಡಿಸಿದ ಮೊತ್ತದ ಮೇಲೆ ಬೋನಸ್ ನೀಡಿರುವ ಸರ್ಕಾರ ಆದೇಶ 
ಸರ್ಕಾರಿ ಆದೇಶ ಸಂಖ್ಯೆ: ಆಇ 09 ಕವಿಇ 2024, ಬೆಂಗಳೂರು, ದಿನಾಂಕ: 11ನೇ ಜುಲೈ, 2024.