ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿಯನ್ನು ಸರ್ಕಾರ ನೀಡಿದೆ. ಈ ರಿಯಾಯಿತಿಯು ದಿನಾಂಕ:23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಎಂದು ಸರ್ಕಾರವು ಶರತ್ತನ್ನು ವಿಧಿಸಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಉಪಯುಕ್ತ ಮಾಹಿತಿ
Friday, August 22, 2025
Tuesday, July 8, 2025
ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಬಗ್ಗೆ ದಿನಾಂಕ:01.07.2025 ರ ಸರ್ಕಾರದ , ಸುತ್ತೋಲೆ
ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ತನ್ನ ವರದಿಯಲ್ಲಿ ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಕೂಡಲೇ ವಾರ್ಷಿಕ ವೇತನ ಬಡ್ತಿ ಮಂಜೂರು ಮಾಡುವುದಕ್ಕೆ ಸಂಬಂಧಿಸಿದಂತೆ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ಹುದ್ದೆಗಳಿಗೆ ನೇಮಕಾತಿ ಹೊಂದಿರುವ ಸರ್ಕಾರಿ ನೌಕರರು ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿರುವ ಘೋಷಣೆ ನಂತರದಲ್ಲಿ ವಾರ್ಷಿಕ ವೇತನ ಬಡ್ತಿ ಬಿಡುಗಡೆಗೆ ಒಳಗೊಂಡಂತೆ ಸಕ್ಷಮ ಪ್ರಾಧಿಕಾರಗಳಿಂದ ವೇತನ ನಿಗಧಿ ಆದೇಶಗಳನ್ನು ಹೊರಡಿಸಲು ಸಾಮಾನ್ಯವಾಗಿ ವಿಳಂಬವಾಗುತ್ತಿದೆ. ಇದರಿಂದ ಅನಗತ್ಯ ತೊಂದರೆಯುಂಟಾಗುತ್ತಿದೆ. ಈ ಸನ್ನಿವೇಶಗಳನ್ನು ಸರಿಪಡಿಸುವ ದೃಷ್ಟಿಯಿಂದ ವೇತನ ನಿಗಧಿ ಆದೇಶಗಳು/ವಾರ್ಷಿಕ ವೇತನ ಬಡ್ತಿ ಬಿಡುಗಡೆಗಳಂತಹ ಪ್ರಕರಣಗಳಲ್ಲಿ ಪರಿವೀಕ್ಷಣಾವಧಿಯನ್ನು ತೃಪ್ತಿಕರವಾಗಿ ಪೂರೈಸಿದ ಘೋಷಣಾ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಮಂಜೂರು ಮಾಡುವ ಕುರಿತು ಸೂಚನೆ ನೀಡುವಂತೆ ಆಯೋಗವು ಶಿಫಾರಸ್ಸು ಮಾಡಿದೆ. ಈ ಹಿನ್ನೆಲೆಯಲ್ಲಿ ಗ್ರೂಪ್-ಸಿ ಮತ್ತು ಡಿ ವೃಂದದ ಸರ್ಕಾರಿ ನೌಕರರ ಪರಿವೀಕ್ಷಣಾ ಅವಧಿಯನ್ನು ವಿಸ್ತರಿಸಿದ ಸಂದರ್ಭದಲ್ಲಿ, ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರಗಳು ಪರಿವೀಕ್ಷಣಾ ಅವಧಿಯನ್ನು ತೃಪ್ತಿಕರವೆಂದು ಘೋಷಿಸಿ ಆದೇಶ ಹೊರಡಿಸಿದ ದಿನಾಂಕದಿಂದ ಒಂದು ತಿಂಗಳೊಳಗೆ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗದಿಪಡಿಸಲು ಅಗತ್ಯ ಕ್ರಮ ಕೈಗೊಳ್ಳತಕ್ಕದ್ದು ಎಂದು ಸರ್ಕಾರವು ಸುತ್ತೋಲೆ ಹೊರಡಿಸಿದೆ.
Subscribe to:
Posts (Atom)